by 32 on | 2025-08-29 16:10:00
Share: Facebook | Twitter | Whatsapp | Linkedin | Visits: 297
ದಿನಾಂಕ: ೨೯.೦೮.೨೦೨೫ರಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನ್‌ಚಂದರವರ ಜನ್ಮವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ೨೦೨೫ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ ೭:೩೦ಕ್ಕೆ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗಳ ಸಾನ್ನಿಧ್ಯದಲ್ಲಿ ಪ್ರಾರಂಭಿಸಲಾಯಿತು. ಡಾ. ಗಿರೀಶ ಕುಲ್ಲೊಳ್ಳಿಯವರ ಸ್ವಾಗತ ಭಾಷಣ ಮಾಡಿದರು. ನಂತರ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜರವರು ಅಧ್ಯಕ್ಷೀಯ ಭಾಷಣ ಮಾಡಿ ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಹಾಗೂ ಶೈಕ್ಷಣಿಕ ಜೀವನದ ಸಮೃದ್ಧಿಗೆ ಎಷ್ಟು ಮುಖ್ಯವೆಂಬುದನ್ನು ವಿವರಿಸಿದರು. ಶ್ರೀ ಎಸ್. ಎಸ್. ಕೋರಿಯವರು ಮೇಜರ್ ಧ್ಯಾನ್‌ಚಂದರವರ ಅದ್ಭುತ ಕ್ರೀಡಾ ಸಾಧನೆಗಳು ಹಾಗೂ ಭಾರತೀಯ ಹಾಕಿ ಕ್ರೀಡೆಗೆ ನೀಡಿದ ಅವಿಸ್ಮರಣೀಯ ಕೊಡುಗೆಯನ್ನು ವಿವರಿಸಿದರು. ಫಿಟ್ ಇಂಡಿಯಾ ಪ್ರತಿಜ್ಞಾ ವಚನವನ್ನು ಶ್ರೀಮತಿ ಸುಭಗಾ ಅವರ ನೇತೃತ್ವದಲ್ಲಿ ಎಲ್ಲರೂ ಸ್ವೀಕರಿಸಿದರು. ಕಾರ್ಯಕ್ರಮವನ್ನು ಡಾ. ಮಹಾದೇವಿ ವಾಲಿಯವರು ನಿರ್ವಹಿಸಿದ್ದು, ಕೊನೆಯಲ್ಲಿ ಡಾ. ಶಿವಲೀಲಾ ದೇವರಮನಿಯವರು ಧನ್ಯವಾದಗಳನ್ನು ಸಲ್ಲಿಸಿದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಕ್ರೀಡಾ ಸ್ಪರ್ಧೆಗಳು ಆಯೋಜಿಸಲ್ಪಟ್ಟವು.
ಈ ಸಂದರ್ಭದಲ್ಲಿ ಡಾ. ರಘುವೀರ ಜಿ. ಕುಲಕರ್ಣಿ, ಪ್ರಾಂಶುಪಾಲರು, ಕಾನೂನು ಮಹಾವಿದ್ಯಾಲಯ, ಡಾ. ಉದಯಕುಮಾರ ನುಚ್ಚಿ, ಮುಖ್ಯಸ್ಥರು ವಿಧಿವಿಜ್ಞಾನ ವಿಭಾಗ ಮತ್ತು ಪ್ರಾಧ್ಯಾಪಕರಾದ ಡಾ. ವಿಕಾಸ್ ದೇಸಾಯಿ, ಡಾ. ಜ್ಯೋತಿ ಪಾಟೀಲ, ಡಾ. ದಯಾನಂದ ಗಣ್ಣೂರ ಡಾ. ಬಸವರಾಜ ಮೇತ್ರಿ, ಡಾ. ಪ್ರಾಚಿ ಪಾರ್ವತಿಕರ್, ಡಾ. ಎಂ. ಆರ್. ಗುಡದಿನ್ನಿ, ಡಾ. ಸಂಜಯ ವಾವರೆ ಮಿಸ್ ಸುಧಾ ಸೌದಿ ಮುಂತಾದವರು ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ