by 1 on | 2024-01-22 17:24:22
Share: Facebook | Twitter | Whatsapp | Linkedin | Visits: 385
ಬೆಂಗಳೂರು ಶಾಲಾ-ಕಾಲೇಜುಗಳ ಬಳಿ ಅಪ್ರಾಪ್ತ ಮಕ್ಕಳು ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದಾರೆ. ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಷಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು ೫೧೦ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ೧೫೪ ಪ್ರಕರಣಗಳು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆಯ ೩೨೮ ಪ್ರಕರಣಗಳು, ತ್ರಿಬಲ್ ರೈಡಿಂಗ್ ೧೭ ಪ್ರಕರಣಗಳು, ಪಾದಾಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಾಲನೆಯ ೧೧ ಪ್ರಕರಣಗಳು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘಿಸಿದ ಸವಾರರ ವಿರುದ್ಧ ೫೧೦ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಪೈಕಿ ೧೦ ವಾಹನ ಸವಾರರು ಅಪ್ರಾಪ್ತರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪೋಷಕರು ಮತ್ತು ವಾಹನಗಳ ಮಾಲೀಕರ ವಿರುದ್ಧ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಕ್ಕಳ ಪೋಷಕರು ಹಾಗೂ ಮಕ್ಕಳಿಗೆ ಎಚ್ಚರಿಕೆ ನೀಡಿ ಸಂಚಾರ ನಿಯಮ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ, ಕಾಲೇಜುಗಳ ಹತ್ತಿರ ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ನಗರ ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?