by 20 on | 2026-01-21 07:49:06
Share: Facebook | Twitter | Whatsapp | Linkedin | Visits: 480
*ಪ್ರಶಿಕ್ಷಣಾರ್ಥಿಗಳ ನಿಕಟ ಸೇವಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ*
ಜಮಖಂಡಿ: ಇಂದು ದಿನಾಂಕ 20-01=2026 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಪಟ್ಟಿಯಲ್ಲಿ ಬಿ.ಎಲ್. ಡಿ.ಇ. ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಪ್ರಶಿಕ್ಷಣಾರ್ಥಿಗಳ ನಿಕಟ ಸೇವಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಯಶಸ್ವಿಯಾಗಿ ಆಚರಿಸಲಾಯಿತು.
ಈ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಎನ್ ಬಿ ಮಾಳಿ ಗುರುಗಳು ತರಬೇತಾರ್ಥಿಗಳಿಗೆ ಅವರ ಕಠಿಣ ಪರಿಶ್ರಮ ಮತ್ತು ಕಲಿಕೆಯ ಉತ್ಸಾಹ, ತರಬೇತಿ ಅವಧಿಯಲ್ಲಿ ತರಬೇತಾರ್ಥಿಗಳು ತೋರಿದ ಬದ್ಧತೆ, ಮತ್ತು ಕಲಿಯುವಿಕೆಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶಕರಾದ ಶ್ರೀ ಪ್ರೇಮಾನಂದ ಹಿರೇಮಠ ರವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಶಿಕ್ಷಕ ವೃತ್ತಿ ಎಂದರೆ ಇದು ಕೇವಲ ನಿಂತ ನೀರಲ್ಲ, ಅದೇ ರೀತಿ ಶಿಕ್ಷಕನಾದವನು ಯಾವಾಗಲೂ ಅಭ್ಯಾಸದಲ್ಲಿ ನಿರತನಾಗಿರಬೇಕು. ಅಂದಾಗ ಮಾತ್ರ ನಿಜವಾದ ಶಿಕ್ಷಕನಾಗಲು ಸಾಧ್ಯ ಎಂದು ಹೇಳಿದರು. ಶ್ರೀ ಡಿ. ವಿ. ಲಮಾಣಿ ಗುರುಗಳು ಕಾರ್ಯಕ್ರಮದ ಅಧ್ಯಕ್ಷತೆ ನುಡಿಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಿದರು. ಸುಮಾರು 20 ದಿನಗಳ ಕಾಲ ನಡೆದ ನಿಕಟ ಸೇವಾ ತರಬೇತಿಯ ಕುರಿತು ವಿದ್ಯಾರ್ಥಿಗಳಾದ ಸಿಂಚನಾ ಕೋರಿಶೆಟ್ಟಿ, ಗೀತಾ ಧಾರಣಿ, ವರ್ಷ ಕಾಂಬಳೆ, ಸಹನಾ ಇಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಶಿಕ್ಷಕರಾದ ವಿ. ಆರ್ ನಾಗನೂರು ಹಾಗೂ ಎಸ್. ಬಿ ಹುಲಿಕೇರಿ ಗುರುಗಳು ಮಾತನಾಡಿದರು.
ಪ್ರಶಿಕ್ಷಣಾರ್ಥಿಗಳಾದ ಸಂಜನಾ ಬಾಡಗಿ ಪ್ರಾರ್ಥನೆ, ಪ್ರಿಯಾಂಕ ಚನಗುಂಡಿ ಸ್ವಾಗತ ಮತ್ತು ಪುಷ್ಪಾರ್ಪಣೆ, ಚನಗೌಡ ಬಿರಾದರ, ಪಲ್ಲವಿ ಹಂಚಿನಾಳ ಅನಿಸಿಕೆ, ಸದಾಶಿವ ಕಲ್ಯಾಣಿ, ಮತ್ತು ವರ್ಷಾ ಶಿಂಗೆ ನಿರೂಪಣೆ, ರೂಪಾ ಕಂಕನವಾಡಿ ವಂದನಾರ್ಪಣೆ ಮಾಡಿದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
ಇಂದಿನ ರಾಶಿ ಭವಿಷ್ಯ (01-09-2026)