by 20 on | 2026-02-28 16:02:45
Share: Facebook | Twitter | Whatsapp | Linkedin | Visits: 423
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ
ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಾವಳಗಿ ವಿಭಾಗದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರಘು ಹಿರೇಮಠ ಅವರು ಉದ್ಘಾಟಿಸಿ, ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಸರ್ ಸಿ ವಿ ರಾಮನ್ ರವರ ಜೀವನ ಹಾಗೂ ಇಂದಿನ ದಿನದಲ್ಲಿ ವಿಜ್ಞಾನದ ಮಹತ್ವ ಮತ್ತು ವೈಜ್ಞಾನಿಕ ಸಾಧನೆಯಾದ ಎಐ ಕುರಿತು ಮಾತನಾಡಿದರು.
ಕಾಲೇಜಿನ ಉಪನ್ಯಾಸಕಿಯರಾದ ಪ್ರೊ. ಅಶ್ವಿನಿ ಅನಂತಪೂರ ಅವರು ಪ್ರತಿಜ್ಞಾವಿಧಿ ಬೋಧನೆ ಹಾಗೂ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನ ವಿಜ್ಞಾನ ಕ್ಲಬ್ಬನ್ನು ಉದ್ಘಾಟಿಸಿ, ಪದಾಧಿಕಾರಿಗಳನ್ನು ರಚಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಜ್ಞಾನದ ಜೊತೆಗೆ ಸಂಭಾಷಣೆ, ದಿನನಿತ್ಯದ ಜೀವನದಲ್ಲಿ ವಿಜ್ಞಾನ, ವಿಜ್ಞಾನ ಮತ್ತು ಅಂಧಶ್ರದ್ಧೆ, ಎ ಐ ಮತ್ತು ಮಾನವನ ಬುದ್ಧಿಯ ಕುರಿತು ವೈಜ್ಞಾನಿಕ ನಾಟಕಗಳನ್ನು ಪ್ರದರ್ಶಿಸಲಾಯಿತು. ಪ್ರಶಿಕ್ಷಣಾರ್ಥಿಗಳಾದ ರಾಮನಗೌಡ ಮಿರ್ಜಿ, ಶ್ರೇಯಾ ಚವ್ಹಾಣ ಅನಿಸಿಕೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ ಜಿ ಜೀರಗಾಳಿ ಅವರು ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಕಾರ್ಯಕ್ರಮದ ವೇದಿಕೆಯ ಮೇಲೆ ಪ್ರೊ.ಎಲ್ ಎಂ ಮಾರ್ಕಪನಳ್ಳಿ, ಪ್ರೊ. ಮಹಾದೇವ ಗಲಬಿ,
ಪ್ರೊ.ಲಕ್ಷ್ಮೀ ಧರ್ಮಟ್ಟಿ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ಸಂಜನಾ ಬಾಡಗಿ ಪ್ರಾರ್ಥನೆ, ಸ್ವಾಗತ ಮತ್ತು ಪುಷ್ಪಾರ್ಪಣೆ ಸವಿತಾ ಮಲಗಾರ, ರೋಹಿಣಿ ಔದಿ ಅತಿಥಿಗಳ ಪರಿಚಯ, ನಿರೂಪಣೆ ನವೀನ ಕುಮಾರ ಮತ್ತು ಸೃಷ್ಟಿ ಸಿಂಧೂರ, ಚನಗೌಡ ಬಿರಾದರ ವಂದನಾರ್ಪಣೆ ಮಾಡಿದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ