by 20 on | 2026-03-11 19:44:24
Share: Facebook | Twitter | Whatsapp | Linkedin | Visits: 497
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ದಿ. 11-3-26 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಿ ಎಲ್ ಡಿ ಇ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಪ್ರೊ.ಆರ್. ಎಸ್ ಉದಪುಡಿ ಅವರು , ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಸಮಾಜದಲ್ಲಿ ಸ್ಟ್ರಿಯರು ಮತ್ತು ಪುರುಷರು ಸಮಾನರು ಯಾವುದೇ ತಾರತಮ್ಯ ಇಲ್ಲ ಹಾಗೂ ಒಬ್ಬರನ್ನೊಬ್ಬರು ಅವಲಂಬಿಸಿದ್ದಾರೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಲಿಂಗ ಸಮಾನತೆ ಬರಬೇಕಾದರೆ ಪ್ರತಿಯೊಬ್ಬರಿಂದ ಸಾದ್ಯ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ನಾಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರದರ್ಶಿಸಲಾಯಿತು. ಪ್ರಶಿಕ್ಷಣಾರ್ಥಿಗಳಾದ ಜಯಲಕ್ಷ್ಮಿ ಅಥಣಿ, ಶಿವಾನಂದ ಅವಟಿ ಅನಿಸಿಕೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ ಜಿ ಜೀರಗಾಳಿ ಅವರು ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಕಾರ್ಯಕ್ರಮದ ವೇದಿಕೆಯ ಮೇಲೆ ಪ್ರೊ.ಎಲ್ ಎಂ ಮಾರ್ಕಪನಳ್ಳಿ, ಪ್ರೊ.ಅಶ್ವಿನಿ ಅನಂತಪೂರ, ಪ್ರೊ.ಪ್ರೇಮಾನಂದ ಹಿರೇಮಠ, ಪ್ರೊ.ಮಹಾದೇವ ಗಲಬಿ,
ಪ್ರೊ.ಲಕ್ಷ್ಮೀ ಧರ್ಮಟ್ಟಿ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿ ಸೃಷ್ಟಿ ಸಿಂದೂರ ಪ್ರಾರ್ಥನೆಯನ್ನು ಭರತನಾಟ್ಯ ಮೂಲಕ ಪ್ರಾರಂಭಿಸಿದರು. ಸ್ವಾಗತ ಮತ್ತು ಪುಷ್ಪಾರ್ಪಣೆ ಈರನಗೌಡ ಬಿರಾದಾರ, ಅಲ್ಲಮಪ್ರಭು ವಾಜಂತ್ರಿ ಅತಿಥಿಗಳ ಪರಿಚಯ, ಸ್ಫೂರ್ತಿ ಗದ್ಯಾಳ ಮತ್ತು ಪ್ರದೀಪ ಹುಕ್ಕೇರಿ, ಉಮೇಶ ನ್ಯಾಮಗೌಡ ವಂದನಾರ್ಪಣೆ ಮಾಡಿದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
ಇಂದಿನ ರಾಶಿ ಭವಿಷ್ಯ (01-09-2026)