by 1 on | 2026-08-20 16:34:20
Share: Facebook | Twitter | Whatsapp | Linkedin | Visits: 69
ದಿನಾಂಕ: ೧೫.೦೮.೨೦೨೬ ರಂದು ನಗರದ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ೮೦ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ. ಆರ್. ವಿ. ಕುಲಕರ್ಣಿಯವರು ಸ್ವಾಗತ ಭಾಷಣ ಮಾಡಿದರು. ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜರವರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, “ನಾವು ಇಂದು ೮೦ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರ ಆದರ್ಶಗಳು ಮತ್ತು ದೇಶಪ್ರೇಮ ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಬೇಕು. ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ)ವು ಶಿಕ್ಷಣ, ಸಂಶೋಧನೆ, ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಶಿಸ್ತು, ಪ್ರಾಮಾಣಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಉಪಯುಕ್ತ ನಾಗರಿಕರಾಗಿ ರೂಪುಗೊಳ್ಳಬೇಕು” ಎಂದು ಹೇಳಿದರು. ಕಾರ್ಯಕ್ರಮದ ಕೊನೆಯಲ್ಲಿ ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯರಾದ ಡಾ. ತೇಜಸ್ವಿನಿ ವಲ್ಲಭರವರು ವಂದನಾರ್ಪಣೆ ಸಲ್ಲಿಸಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳಿಗ್ಗೆ ೮.೩೦ಕ್ಕೆ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಆವರಣದಲ್ಲಿ ‘ಹರ್ ಘರ್ ತಿರಂಗಾ ಯಾತ್ರೆ–೨೦೨೬’ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ದೇಶಭಕ್ತಿ ಹಾಗೂ ಉತ್ಸಾಹದಿಂದ ಯಾತ್ರೆಯಲ್ಲಿ ಪಾಲ್ಗೊಂಡರು. ಯಾತ್ರೆಯು ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಕಟ್ಟಡದಿಂದ ಆರಂಭಗೊಂಡು, ಮುಖ್ಯ ದ್ವಾರ, ಶೋಲಾಪುರ ರಸ್ತೆ, ಲಿಂಗದ ಗುಡಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಎನ್.ಆರ್.ಐ. ಅತಿಥಿಗೃಹದ ಮೂಲಕ ಸಾಗಿ ಪುನಃ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಕಟ್ಟಡದ ಆವರಣಕ್ಕೆ ತಲುಪಿತು. ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿದು, ದೇಶಭಕ್ತಿ, ಏಕತೆ ಮತ್ತು ರಾಷ್ಟ್ರಾಭಿಮಾನವನ್ನು ಸಾರುವ ಸಂದೇಶದೊಂದಿಗೆ ‘ಹರ್ ಘರ್ ತಿರಂಗಾ ಯಾತ್ರೆ’ ಯಶಸ್ವಿಯಾಗಿ ನಡೆಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ)ದ ಐಕ್ಯೂಎಸಿ, ಕ್ರೀಡಾ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (NSS) ವಿಭಾಗದ ವತಿಯಿಂದ ಆಗಸ್ಟ್ ೯ರಿಂದ ೧೭ರವರೆಗೆ ‘ಹರ್ ಘರ್ ತಿರಂಗಾ ಅಭಿಯಾನ–೨೦೨೬’ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಅಂಗವಾಗಿ ಧ್ವಜ ಸಂಹಿತೆ ಕುರಿತು ಜಾಗೃತಿ ಕಾರ್ಯಕ್ರಮ, ವಿದ್ಯಾರ್ಥಿಗಳಿಂದ ‘ಹರ್ ಘರ್ ತಿರಂಗಾ’ ಕುರಿತು ಜಾಗೃತಿ, ಆಸ್ಪತ್ರೆಯಲ್ಲಿ ತ್ರಿವರ್ಣ ಧ್ವಜದ ಅಲಂಕಾರ, ‘ವಂದೇ ಮಾತರಂ’ ಸಾಮೂಹಿಕ ಗಾಯನ, ತಿರಂಗಾ ಯಾತ್ರೆ ಹಾಗೂ ‘ಸೆಲ್ಫಿ ವಿತ್ ತಿರಂಗಾ’ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸಮಾರಂಭದಲ್ಲಿ ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯರಾದ ಡಾ. ತೇಜಸ್ವಿನಿ ವಲ್ಲಭ, ಉಪಪ್ರಾಚಾರ್ಯರಾದ ಡಾ. ಆನಂದ ಅಂಬಲಿ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ನಿರ್ದೇಶಕರಾದ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕರಾದ ಡಾ. ಎಸ್. ಎನ್. ಬೆಂಟೂರ, ಅಲೈಡ್ ಹೆಲ್ತ್ ಸೈನ್ಸಸ್ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ, ವಿದ್ಯಾರ್ಥಿ ಕಲ್ಯಾಣ ಹಾಗೂ ಕ್ರೀಡಾ ವಿಭಾಗದ ಡೀನ್ ಡಾ. ಗಿರೀಶ ಕುಲ್ಲೊಳ್ಳಿ, ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರಘುವೀರ್ ಜಿ. ಕುಲಕರ್ಣಿ, ಸಂಶೋಧನೆ ಮತ್ತು ಅಭಿವೃದ್ಧಿ (R&D) ವಿಭಾಗದ ನಿರ್ದೇಶಕರಾದ ಡಾ. ಎಂ. ಎಂ. ಪಾಟೀಲ, ಉಪಕುಲಸಚಿವರಾದ ಶ್ರೀ ಸತೀಶ ಪಾಟೀಲ, ಸಹಾಯಕ ಕುಲಸಚಿವರಾದ ಡಾ. ಶ್ರೀಧರ ಬಗಲಿ ಹಾಗೂ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ