by 1 on | 2026-08-20 16:36:48
Share: Facebook | Twitter | Whatsapp | Linkedin | Visits: 128
ದಿನಾಂಕ 29 ಜುಲೈ 2026 ರಂದು ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ತಲುಪಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ, ಬಿಎಲ್‌ಡಿಇ ಡೀಮ್ಡ್ ವಿಶ್ವ ವಿದ್ಯಾಲಯದಿಂದ ಸಮೀಪದ ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರಲ್ಲಿ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ನವದೆಹಲಿಯ ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್ (CCDC) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರೊ. ಡಿ. ಪ್ರಭಾಕರನ್ ಉದ್ಘಾಟಿಸಿ ಮಾತನಾಡಿ, ದೂರದ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಸಮಾನ ಮತ್ತು ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವಲ್ಲಿ ಟೆಲಿಮೆಡಿಸಿನ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ. ಎಂ. ಸಿ. ಯಡವಣ್ಣವರ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಸಹ ಪ್ರಾಧ್ಯಾಪಕರಾದ ಡಾ. ತನುಜಾ ಪಿ. ಪಟ್ಟಣಕರ ಅತಿಥಿಗಳನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ CCDCಯ ಬ್ರಿಡ್ಜ್ ಸೆಂಟರ್ ಮುಖ್ಯಸ್ಥರಾದ ಡಾ. ಅರುಣ್ ಪಿ. ಜೋಸ್ ಅವರು ಡಿಜಿಸೇತು (DigiSetu) ಆ್ಯಪ್‌ನ ಪ್ರಾತ್ಯಕ್ಷಿಕೆಯನ್ನು ನೀಡಿ, ವೈದ್ಯರು ಹಾಗೂ ಗ್ರಾಮೀಣ ಸಮುದಾಯದ ನಡುವೆ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸಲು ಈ ಆ್ಯಪ್ ಹೇಗೆ ನೆರವಾಗುತ್ತದೆ ಎಂಬುದನ್ನು ವಿವರಿಸಿದರು.
ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ, ಡಾ. ಅರುಣ ಚಂ. ಇನಾಮದಾರ ಮಾತನಾಡಿ, ಗ್ರಾಮೀಣ ಜನತೆಗೆ ತಜ್ಞ ವೈದ್ಯರ ಸೇವೆ ಸುಲಭವಾಗಿ ದೊರೆಯುವಂತೆ ಡಿಜಿಟಲ್ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ವಿಶ್ವವಿದ್ಯಾಲಯ ಸಂಪೂರ್ಣ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಡೀನ್ ಡಾ. ತೇಜಸ್ವಿನಿ ವಲ್ಲಭ, ಹಿರಿಯ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಂಶುಪಾಲ ಡಾ. ಆನಂದ ಅಂಬಲಿ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಉಪಸ್ಥಿತರಿದ್ದರು. ಡಾ. ಚಂದ್ರಿಕಾ ದೊಡ್ಡಿಹಾಳ ವಂದನಾರ್ಪಣೆ ಸಲ್ಲಿಸಿದರು.
ಈ ಟೆಲಿಮೆಡಿಸಿನ್ ಯೋಜನೆ ಗ್ರಾಮೀಣ ಜನತೆಗೆ ತಜ್ಞ ವೈದ್ಯರ ಸಲಹೆಯನ್ನು ತ್ವರಿತವಾಗಿ ತಲುಪಿಸುವುದರ ಜೊತೆಗೆ, ತಂತ್ರಜ್ಞಾನ ಆಧಾರಿತ ಸಮಾನ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ