by 1 on | 2026-08-20 16:41:18
Share: Facebook | Twitter | Whatsapp | Linkedin | Visits: 70
ದಿನಾಂಕ ೨೯ ಜುಲೈ ೨೦೨೬ ರಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ನಾಡಿನ ಶ್ರೇಷ್ಠ ಸಂತ, ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸುವ ಮೂಲಕ ಗುರುಪೂರ್ಣಿಮೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ, ಡಾ. ಅರುಣ ಇನಾಮದಾರ ಅವರು ಮಾತನಾಡುತ್ತ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಾತಿ, ಮತ, ಪಂಥಗಳ ಭೇದವಿಲ್ಲದೆ ಎಲ್ಲರಿಗೂ ಜೀವನದ ಸಾರ್ಥಕತೆಯನ್ನು ತಿಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಅವರ ಸರಳ ಜೀವನ, ನಿಸ್ವಾರ್ಥ ಸೇವೆ ಹಾಗೂ ಮೌಲ್ಯಾಧಾರಿತ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಹಿರಿಯ ಉಪಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಆನಂದ ಪಿ. ಅಂಬಲಿ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಪ್ರೊ. ಡಾ. ಆರ್. ಜಿ. ಕುಲಕರ್ಣಿ, ಡೀನ್ ಮತ್ತು ಪ್ರಾಂಶುಪಾಲರು, ಕಾನೂನು ಶಾಲೆ, ಡಾ. ಉದಯಕುಮಾರ ನುಚ್ಚಿ, ಡಾ. ಶ್ರೀನಿವಾಸ ರಾಯ್ಕರ್, ಡಾ. ದೀಪಾ ಸಜ್ಜನರ, ಡಾ. ಸುರೇಖಾ ಹಿಪ್ಪರಗಿ, ಡಾ. ಪ್ರಕಾಶ ಪಾಟೀಲ, ಡಾ. ವಿಜಯಕುಮಾರ ವಾರದ, ಡಾ. ಪ್ರವೀಣ ಗಂಗನಹಳ್ಳಿ, ಡಾ. ಮಂಜುಳಾ, ಡಾ. ಶ್ರೀಧರ ಬಗಲಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ