ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಶಿಕ್ಷಣ EDUCATION

ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ

by 1 on | 2026-08-20 16:44:00

Share: Facebook | Twitter | Whatsapp | Linkedin | Visits: 65


ಬಿ.ಎಲ್.ಡಿ.ಇ. (ಡೀಮ್ಡ್  ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ

ಬಿ.ಎಲ್.ಡಿ.ಇ. (ಡೀಮ್ಡ್  ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ

ವಿಜಯಪುರ, ಜುಲೈ 22, 2026: ಜೀವ ಉಳಿಸುವ ಅತ್ಯಮೂಲ್ಯ ಕೌಶಲ್ಯವಾದ ಹೃದಯ–ಶ್ವಾಸಕೋಶ ಪುನರುಜ್ಜೀವನ (CPR) ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿ (IAP), ವಿಜಯಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ಸಮನ್ವಯ ಆಂಗ್ಲ ಮಾಧ್ಯಮ ಶಾಲೆ, ವಿಜಯಪುರದಲ್ಲಿ 2026ರ ಜುಲೈ 22ರಂದು ಹೃದಯ–ಶ್ವಾಸಕೋಶ ಪುನರುಜ್ಜೀವನ (CPR) ಜಾಗೃತಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹಠಾತ್ ಹೃದಯದ ಕಾರ್ಯ ಸ್ಥಗಿತಗೊಂಡಂತಹ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಅಗತ್ಯವಾದ ಪ್ರಾಥಮಿಕ ಚಿಕಿತ್ಸಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಹಾಗೂ ಪ್ರಾಯೋಗಿಕ ತರಬೇತಿ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ 2025ರ ಚಾಪ್ಟರ್ ಅಧ್ಯಕ್ಷರಾದ      ಡಾ. ಎಸ್. ವಿ. ಪಾಟೀಲ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಎಸ್. ಎಸ್. ಕಲ್ಯಾಣಶೆಟ್ಟರ್, ಜಿಲ್ಲಾ ಕಾರ್ಯದರ್ಶಿ ಡಾ. ಅತುಲ್ ತೊಬ್ಬಿ, ಮುಖ್ಯ ತರಬೇತುದಾರರಾದ ಡಾ. ಜೆ. ಪ್ರಕಾಶ ವೇಮಣ್ಣ ಹಾಗೂ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸಿದ್ದು ಬಿರಾದಾರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ತರಬೇತುದಾರರಾಗಿ ಡಾ. ಜೆ. ಪ್ರಕಾಶ ವೇಮಣ್ಣ ಅವರು ಹೃದಯ–ಶ್ವಾಸಕೋಶ ಪುನರುಜ್ಜೀವನದ ಮಹತ್ವ, ತುರ್ತು ಪರಿಸ್ಥಿತಿಯಲ್ಲಿ ಅನುಸರಿಸಬೇಕಾದ ಕ್ರಮಗಳು, ಎದೆ ಒತ್ತುವಿಕೆಯ (Chest Compressions) ಸರಿಯಾದ ವಿಧಾನ, ಕೃತಕ ಉಸಿರಾಟ ನೀಡುವ ವಿಧಾನ ಹಾಗೂ ಜೀವ ಉಳಿಸುವ ಮೂಲಭೂತ ತಂತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ನಾಗರಿಕರೂ ಈ ಜೀವ ರಕ್ಷಕ ಕೌಶಲ್ಯವನ್ನು ಕಲಿಯಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು.

ತರಬೇತುದಾರರಾಗಿ ಡಾ. ಅನೀಲಕುಮಾರ ಸಜ್ಜನ, ಡಾ. ರಾಕೇಶ ಬಳಮಕರ, ಡಾ. ಶಿವಕುಮಾರ ಇಂಡಿ,                ಡಾ. ಅಮೋಘ ಬಿದರಿ ಹಾಗೂ ಡಾ. ಯಲಗೂರಸ್ವಾಮಿ ಕೊಲ್ಕರ ಅವರು ಭಾಗವಹಿಸಿ, ತರಬೇತಿ ಮಾದರಿಗಳ (Manikins) ಮೂಲಕ ವಿದ್ಯಾರ್ಥಿಗಳಿಗೆ ಹೃದಯ–ಶ್ವಾಸಕೋಶ ಪುನರುಜ್ಜೀವನದ ವಿಧಾನವನ್ನು ಪ್ರಾಯೋಗಿಕವಾಗಿ ಕಲಿಸಿಕೊಟ್ಟರು.

ಹೃದಯದ ಕಾರ್ಯ ಏಕಾಏಕಿ ನಿಂತಾಗ ಸಮಯೋಚಿತವಾಗಿ ಮತ್ತು ಸರಿಯಾದ ವಿಧಾನದಲ್ಲಿ ಸಿಪಿಆರ್ ನೀಡಿದರೆ ಅಮೂಲ್ಯ ಜೀವಗಳನ್ನು ಉಳಿಸಬಹುದೆಂಬ ಸಂದೇಶವನ್ನು ವೈದ್ಯರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ತುರ್ತು ಸಂದರ್ಭಗಳಲ್ಲಿ ಧೈರ್ಯ, ಸಮಯಪ್ರಜ್ಞೆ ಮತ್ತು ಸರಿಯಾದ ಕ್ರಮದ ಮಹತ್ವವನ್ನು ಉದಾಹರಣೆಗಳೊಂದಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಜೀವ ರಕ್ಷಕ ಕೌಶಲ್ಯವನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದರೊಂದಿಗೆ ಸಮಾಜದಲ್ಲಿ ಜೀವ ರಕ್ಷಕ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು

Search
Recent News
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment