by 1 on | 2024-03-04 16:59:24
Share: Facebook | Twitter | Whatsapp | Linkedin | Visits: 555
“ರಾಜ್ಯದಲ್ಲಿ 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ನಷ್ಟು ಆರ್ಥಿಕತೆ ಬೆಳೆಸುವ ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯಗಳಲ್ಲಿ ಗಮನಹರಿಸಲಾಗುತ್ತಿದೆ. ಇದರಿಂದ ಉದ್ಯೋಗಾವಕಾಶ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಅನಕೂಲವಾಗಲಿದೆ” ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಹಮ್ಮಿಕೊಂಡಿರುವ ಗ್ಲೋಬಲ್ ಬ್ಯುಸಿನೆಸ್ ಫೆÇೀರಂನ 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಮಾತನಾಡಿದ ಅವರು, 'ಸರ್ಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ರಾಜ್ಯ ಸರ್ಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುತ್ತಿದೆ. ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0 ಅನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. 'ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿದೆ. ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ' ಎಂದು ತಿಳಿಸಿದರು.
'ಉತ್ಕøಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ. ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೇ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ.
ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುತ್ತಿದೆ' ಎಂದು ಮಾಹಿತಿ ನೀಡಿದರು.
ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿ ಹೊರಹೊಮ್ಮಿದೆ' ಎಂದು ಎಂ.ಬಿ. ಪಾಟೀಲ್ ವಿವರಿಸಿದರು. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡರು.
ನ್ಯೂಯಾರ್ಕಿನ ವಲ್ರ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯೂಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯೂಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ. ಆರ್. ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯೂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?