by 1 on | 2024-05-09 14:34:11
Share: Facebook | Twitter | Whatsapp | Linkedin | Visits: 304
ಬೀರು ಬೇಸಿಗೆಯಲ್ಲಿ ತತ್ತರಿಸಿದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಆಲಮಟ್ಟಿ ಜಲಾಶದಿಂದ ಮುಳವಾಡ ಏತನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಇಂದಿನಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವದನ್ನು ತಪ್ಪಿಸಲು ಈ ಹಿಂದೆ ತಿಡಗುಂದಿ ಕಾಲುವೆಯಿಂದ ನೀರು ಹರಿಸಿ, ಭೂತನಾಳ ಕೆರೆ ತುಂಬಿಸಿ, ನಗರದಲ್ಲಿ ಸಮಪರ್ಕವಾಗಿ ಕುಡಿಯುವ ನೀರು ಪೂರೈಸಲಾಗಿತ್ತು. ಈಗ ಮತ್ತೆ ಭೂತನಾಳ ಕೆರೆಗೆ ಹಾಗೂ ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯಡಿ ತಿಡಗುಂದಿ ಕಾಲುವೆ ಮೂಲಕ ನೀರು ಹರಿಸಲಾಗುವುದು.
ಬಸವನಬಾಗೇವಾಡಿ ತಾಲೂಕಿನ ಅರೇಶಂಕರ ಮತ್ತು ಇತರೆ 19 ಗ್ರಾಮಗಳ ಕಣಕಾಲ ಮತ್ತು 11 ಗ್ರಾಮಗಳ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯು 0.45ಟಿ.ಎಂ.ಸಿ ನೀರನ್ನು ಮುಳವಾಡ ಏತನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ಹರುಸುವಂತೆ ಕೋರಲಾಗಿತ್ತು. ಇದಕ್ಕೆ ಸ್ಪಂಧಿಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತರು ಮೇ 28 ರವರೆಗೆ 2 ಟಿ.ಎಂ.ಸಿ ನೀರು ಕೆರೆಗಳಿಗೆ ಹರಿಯಲಿದೆ ಎಂದರು.
ಭೀಕರ ಬರ ಹಾಗೂ ಬೇಸಿಗೆ ಇರುವದರಿಂದ ಕುಡಿಯುವ ನೀರು ಒದಗಿಸಲು ಕಾಲುವೆಗಳಿಗೆ ನೀರು ಹರಿಸುವಂತೆ ಒಂದು ತಿಂಗಳಿನಿಂದ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಕೋರಿದ್ದೆ. ನೀತಿಸಂಹಿತೆ ಕಾರಣ ಚುನಾವಣೆ ಆಯೋಗದ ಅನುಮತಿ ಪಡೆದು, ಕಾಲುವೆ ಮೂಲಕ ನೀರು ಹರಿಸಲು ಇದೀಗ ಆದೇಶ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?