by 1 on | 2024-01-08 18:39:39 Last Updated by Admin on2026-09-07 00:50:58
Share: Facebook | Twitter | Whatsapp | Linkedin | Visits: 2421
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ವಿವರಿಸಿದರು.
ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.
ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.
ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.
ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲ, ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
ಇಂದಿನ ರಾಶಿ ಭವಿಷ್ಯ (01-09-2026)