by 21 on | 2025-03-04 12:54:14 Last Updated by 21 on2026-09-06 00:21:40
Share: Facebook | Twitter | Whatsapp | Linkedin | Visits: 277
ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಪೂರ್ಣಗೊಳ್ಳಬೇಕಾದರೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟಕ್ಕೂ ಮಹತ್ವ ಕೊಟ್ಟು ಮುನ್ನಡೆಯಬೇಕು ಆಗ ಮಾತ್ರ ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸನ್ನು ಹೊಂದಲು ಸಾಧ್ಯವೆಂದು ಪ್ರಾಚಾರ್ಯರಾದ ಡಾ. ಎ. ವಿ.ಸೂರ್ಯವಂಶಿ ಅವರು ಹೇಳಿದರು
ಪಟ್ಟಣದ ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇಂದು ನೆಹರು ಯುವ ಕೇಂದ್ರ ವಿಜಯಪುರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮತ್ತು ಅಲ್ ಅರಪಾತ್ ಯೂತ್ ವೆಲ್ಫೇರ್ ಸೊಸೈಟಿ ಬಸವನಬಾಗೇವಾಡಿಯ ಸಂಯುಕ್ತ ಆಶ್ರಯದಲ್ಲಿ 2024 25ರ ತಾಲೂಕ ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯ ಸ್ಥಾನವನ್ನು ವಹಿಸಿಕೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಂಡು ನಿರಂತರವಾಗಿ ಶ್ರದ್ಧೆಯಿಂದ ಮುಂದುವರೆದರೆ ವಿಶ್ವಮಟ್ಟದ ಕ್ರೀಡಾಪಟುವಾಗಿ ದೇಶದ ಗೌರವವನ್ನು ಕಾಪಾಡಲು ಸಾಧ್ಯವೆಂದು ಅಭಿಪ್ರಾಯಪಟ್ಟರು.
ನೆಹರು ಯುವ ಕೇಂದ್ರದ ವತಿಯಿಂದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಚಸ್, ಕೇರಂ, ಖೋಖೋ , ಕಬಡ್ಡಿ ಹಾಗೂ ಒಂದು 100 ಮೀಟರ್, 400 ಮೀಟರ್ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ ಎಲ್ಲಾ ಆಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ತೋರ್ಪಡಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ವೇದಿಕೆಯ ಮೇಲೆ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬಿ. ಎಮ್. ಸಾಲವಾಡಗಿ, ಆಯ್. ಕ್ಯೂ. ಎ. ಸಿ. ಮುಖ್ಯಸ್ಥರಾದ ದಿಲೀಪ್ ಕುಮಾರ್ ಎನ್ ವೈ ಪಿ ಎ ಮುಖ್ಯಸ್ಥರಾದ ಎಸ್ ಕೆ ಜಾಲವಾದಿ ಎಲ್ಎಸ್ ಜಮಖಂಡಿ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಡಾ. ಎಸ್ ಬಿ ಜನಗೊಂಡ್, ಎಂ ಕೆ ಯಾದವ್, ಪಿ ಎಸ್ ನಾಟಿಕರ್ ಆರ್ ಎಂ ಮುಜಾವರ್, ಜಯರಾಮರೆಡ್ಡಿ ಹಾಗೂ ಎಲ್ಲಬಹುದೆತರ ಸಿಬ್ಬಂದಿಯವರು ಹಾಜರಿದ್ದರು. ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ. ವೈ ಬಿ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ